ವಿಟ್ಲ: ಕನ್ಯಾನ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ನುಗ್ಗಿ ಅಶ್ಲೀಲ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ: ಪ್ರಕರಣ ಪ್ರಕರಣ ದಾಖಲು
ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಎಂಬುವವರು ಮಾಸಿಕ ವೃದ್ದಾಪ್ಯ ವೇತನ ಮಂಜೂರಾತಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅರ್ಜಿದಾರರ ಪತ್ನಿ ಹೆಸರಿನಲ್ಲಿ ಸುಮಾರು ಒಂದು ವಾಣಿಜ್ಯ ಕಟ್ಟಡವಿದ್ದು ಅದರಲ್ಲಿ ಸುಮಾರು 8 ಕೊಠಡಿಗಳಿದ್ದು ಬಾಡಿಗೆಗೆ ನೀಡಿರುವ ಕಾರಣ ಪಿಂಚಣಿಗೆ ನಿಗದಿಪಡಿಸಿದ ಆದಾಯಕ್ಕಿಂತ ಜಾಸ್ತಿ ಆದಾಯವನ್ನು ಗ್ರಾಮ ಆಡಳಿತ ಅಧಿಕಾರಿಯವರು ನಮೂದಿಸಿದ್ದರು.

ಈ ಬಗ್ಗೆ ನಿನ್ನೆಯ ದಿನ (ಸೋಮವಾರ) ಏಕಾಏಕಿ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ನುಗ್ಗಿ ಬಂದ ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ರವರು ತನ್ನ ಅರ್ಜಿಯಲ್ಲಿ ನಮೂದಿಸಿದ ಆದಾಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ,
ಕನ್ಯಾನ ಗ್ರಾಮದ ಗ್ರಾಮ ಆಡಳಿತ ಗ್ರಾಮ ಆಡಳಿತ ಅಧಿಕಾರಿಗೆ ಅಶ್ಲೀಲ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆಯೊಡ್ಡಿದ ಪ್ರಕರಣದ ಕುರಿತು ಈ ದಿನ ವಿಟ್ಲ ಠಾಣೆಗೆ ಮಾನ್ಯ ತಹಶೀಲ್ದಾರ್ ಬಂಟ್ವಾಳ ರವರ ಅನುಮತಿಯೊಂದಿಗೆ ಗ್ರಾಮ ಆಡಳಿತ ಅಧಿಕಾರಿ ಅನಿಲ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ (ರಿ) ತಾಲೂಕು ಘಟಕ ಬಂಟ್ವಾಳ ರವರಿಂದ ದೂರು ನೀಡಿದನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
*ಘಟನೆಯ ಬಗ್ಗೆ ಖಂಡನೆ*: ಘಟನೆಯ ಬಗ್ಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಘಟಕ ಮತ್ತು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದಿಂದ ಘಟನೆಯ ಬಗ್ಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿರುತ್ತಾರೆ.
ಠಾಣೆಗೆ ದೂರು ನೀಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷರಾದ ಶ್ರೀ ಯಂ.ಪ್ರವೀಣ್ ಕುಮಾರ್, ಉಪಾಧ್ಯಕ್ಷ ಕರಿಬಸಪ್ಪ ನಾಯಕ್, ಉಳ್ಳಾಲ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶ್ರೀ ತೌಫಿಕ್ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು, ಹಾಗೂ ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರಾದ ಯತೀಶ್ ಹಡೀಲು, ಜಿಲ್ಲಾ ಉಪಾಧ್ಯಕ್ಷ ರಾಘವ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು…




