November 24, 2026

ವಿಟ್ಲ: ಬೊಳ್ಪಾದೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ: ಐವರ ವಿರುದ್ಧ ಪ್ರಕರಣ ದಾಖಲು

0
IMG-20220615-WA0046

ವಿಟ್ಲ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಬೊಳ್ಪಾದೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 23-11-2026ರಂದು ಸಂಜೆ ವೇಳೆ ಬೊಳ್ಪಾದೆಯಲ್ಲಿ ಸುಮಾರು 5ರಿಂದ 10 ಮಂದಿ ಗುಂಪು ಸೇರಿಕೊಂಡು ಗಲಾಟೆ ನಡೆಸುತ್ತಿರುವ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿಗೆ ಕೆಲವರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿರುವುದನ್ನು ಕಂಡು ಗಲಾಟೆಯಲ್ಲಿ ಭಾಗಿಯಾಗಿದ್ದವರು ಪರಾರಿಯಾಗಿದ್ದಾರೆ. ಈ ಪೈಕಿ ಬಶೀರ್ ಪುಣಚ, ಆಶಿಕ್ ಬೋಳ್ಬಾದೆ, ಸಫ್ವಾನ್ ಕುಡ್ತಮುಗೇರು, ಅಸೀಫ್ ಕೆಲಿಂಜ ಹಾಗೂ ದರ್ವೇಶ್ ಬೋಳ್ಬಾದೆ ಸೇರಿದಂತೆ ಇತರರು ಗಲಾಟೆಯಲ್ಲಿ ತೊಡಗಿರುವುದು ಕಂಡುಬಂದಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 242/2026, ಕಲಂ 194(2) BNS 2023ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!