ವಿಟ್ಲ: ಕ್ಷುಲ್ಲಕ ಕಾರಣಕ್ಕೆ ದೊಡ್ಡಪ್ಪನನ್ನೇ ಕೊಲೆಗೈದ ಮಗಳು! ಪೊಲೀಸರಿಂದ ತನಿಖೆ!!
ಮನೆಯ ಬಳಿ ಬಂದು ಗಲಾಟೆ ಮಾಡಿದ ಕ್ಷುಲ್ಲಕ ಕಾರಣಕ್ಕೆ ದೊಡ್ಡಪ್ಪನನ್ನೇ ಮಗಳು ಕೊಲೆಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಘಟನೆಯ ವಿವರ:
ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ(55) ಮೃತಪಟ್ಟವರು.
ಚೆನ್ನಯ್ಯ ಪೂಜಾರಿ ಅವರು ತನ್ನಸೋದರನ ಮಗಳು ವಾಸವಿದ್ದ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದು ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಅಷ್ಟರಲ್ಲಿ ಸೋದರನ ಮಗಳು ಚಾಕುವಿನಿಂದ ತಿವಿದ ಪರಿಣಾಮ ಚೆನ್ನಯ್ಯ ಪೂಜಾರಿ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



