ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು
ನವದೆಹಲಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ಹೈಕೋರ್ಟ್ ಬೇಲ್ ಮೇಲೆ ಹೊರಗೆ ಬಂದಿದ್ದ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲೇ ಗತಿಯಾಗಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, 2 ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿದೆ.
2023ರ ಚುನಾವಣೆ ಗೆದ್ದ ಬಳಿಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಾಸಕ ವಿನಯ್ ಕುಲಕರ್ಣಿ ಬಹುತೇಕ ಜೈಲಿನಲ್ಲೇ ಇದ್ದರು. ಜಾಮೀನು ಪೆರೋಲ್ ಹೀಗೆ ಎರಡೆರಡು ಬಾರಿ ಜೈಲಿನಿಂದ ಹೊರ ಬಂದಿದ್ದ ವಿನಯ್ ಕುಲಕರ್ಣಿ ಈಗ ಮತ್ತೆ ಜೈಲುಪಾಲಾಗಿದ್ದಾರೆ. ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶ ಹೊರಡಿಸಿದೆ.



