November 26, 2026

11 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ: ಇಬ್ಬರು ಆರೋಪಿಗಳ ಬಂಧನ

0
image_editor_output_image-690227235-1795668142005

ಬೆಂಗಳೂರು: ಯಲಹಂಕ ಓಲ್ಡ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ 11 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಡ್ರಗ್ಸ್‌ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಇಮ್ರಾನ್ ಸಿದ್ದಿಕ್ ಮತ್ತು ಆಯಿಷಾ ಬಂಧಿತ ಆರೋಪಿಗಳು. ಆರೋಪಿಗಳು ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ತರುತ್ತಿದ್ದರು. ಬಳಿಕ ಯಲಹಂಕ ಉಪನಗರದ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದರು.

ಬಂಧಿತರಿಂದ 5 ಕೆಜಿಗೂ ಹೆಚ್ಚಿನ ತೂಕದ MDMA ಮತ್ತು ಒಂದು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!