November 26, 2026

ಬೆಂಗಳೂರಲ್ಲಿ ಪಂಜಾಬಿ ಗಾಯಕ ದಿಲ್ಜಿತ್ ದೋಸಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ

cea50bfe-d6bf-4e80-8489-3099b41a1fab

ಬೆಂಗಳೂರು: ಪಂಜಾಬಿ ಖ್ಯಾತ ಗಾಯಕ ದಿಲ್ಜಿತ್ ದೋಸಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ ಬಂದಿದೆ. ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿದೆ. ಜೊತೆಗೆ ಖಲಿಸ್ತಾನ್ ಜಿಂದಾಬಾದ್ ಎಂಬ ಸಂದೇಶವನ್ನೂ ಕಳುಹಿಸಲಾಗಿದೆ.

ನವೆಂಬರ್ 29ರಂದು ಮಾದನಾಯಕನಹಳ್ಳಿ ಬಳಿಯ ಬಿಇಐಸಿಯಲ್ಲಿ ದಿಲ್ಜಿತ್ ದೋಸಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 20ರಿಂದ 25 ಸಾವಿರ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಕಾರ್ಯಕ್ರಮದ ವೇಳೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಕಚೇರಿಗೆ ಇಮೇಲ್ ಮೂಲಕ ಈ ಬೆದರಿಕೆ ಸಂದೇಶ ರವಾನೆಯಾಗಿದೆ. ಕಾರ್ಯಕ್ರಮಕ್ಕೆ ಮೆಟ್ರೋದಲ್ಲಿ ಬರಬೇಡಿ, ಮಕ್ಕಳನ್ನು ಕರೆದುಕೊಂಡು ಬರಬೇಡಿ ಸ್ಫೋಟ ಮಾಡುತ್ತೇವೆ ಎಂದು ಇಮೇಲ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.

error: Content is protected !!