November 27, 2026

ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗಲಾಟೆ: ಪ್ರಕರಣ ದಾಖಲು

0
first-information-report

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 26-11-2026 ರಂದು ಬೆಳಿಗ್ಗೆ ಸುಮಾರು 11:40 ಗಂಟೆಗೆ ಈ ಘಟನೆ ನಡೆದಿದ್ದು, ಯಾವುದೇ ಪೂರ್ವಾನುಮತಿ ಪಡೆಯದೆ ಕೆಲವರು ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿ ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಟೋಲ್ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ವಿಭಾಗದ ಯೋಜನಾ ನಿರ್ದೇಶಕರು ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026, ಕಲಂ 189(2), 191(2) ಜೊತೆಗೆ 190 ಬಿಎನ್‌ಎಸ್ 2023ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!