November 27, 2026
c2d5569e-cdea-4b33-b172-738c1adab837

ಹಾಸನ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ರೂಪ ಅವರ ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಸುಜಯ್ (21) ಮೃತ ದುರ್ದೈವಿ. ತಾಯಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾಗಲೇ ಅಪಘಾತದಲ್ಲಿ ಮಗ ಸಾವನ್ನಪ್ಪಿದ್ದಾನೆ.

ಬುಧವಾರ (ನ.25) ಸಂಜೆ ಲಕ್ಷ್ಮೀಪುರ ಬಳಿ ಬೈಕ್ ಅಪಘಾತದಲ್ಲಿ ಸುಜಯ್ ಮೃತಪಟ್ಟಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ರೂಪ ಅವರು ಆಲೂರಿಗೆ ವಾಪಾಸ್ ಆಗಿದ್ದಾರೆ. ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಲೂರು ಆಸ್ಪತ್ರೆಯಲ್ಲಿ ಸುಜಯ್ ಮೃತದೇಹ ಇರಿಸಲಾಗಿದ್ದು, ಮುಂದಿನ ಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಲೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿತ್ತು.

error: Content is protected !!