ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ: ಆರೋಪಿ ಕಾರ್ತಿಕ್ ಅರೆಸ್ಟ್
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿ ಕರೆ ಮಾಡಿದ್ದ ಆರೋಪಿಯನ್ನ ಪೊಲೀಸ್ರು ಬಂಧಿಸಿದ್ದಾರೆ.
ಕಾರ್ತಿಕ್ ಬಂಧಿತ ಆರೋಪಿ. ಕಳೆದ 7ನೇ ತಾರೀಖಿನಂದು ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಕಾರ್ತಿಕ್‌ನನ್ನ ಸದಾಶಿವನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಆಟೋ ಚಾಲಕ ಭಗವಂತಪ್ಪ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್‌ನನ್ನ ಬಂಧಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




