November 28, 2026

ಮಹಿಳಾ ಜಿಲ್ಲಾಧಿಕಾರಿಗೆ ಅಶ್ಲೀಲ ಸಂದೇಶ: ತಮಿಳುನಾಡಿನ ಟಿವಿಕೆ ಶಾಸಕ ಅರುಳ್ ವಿಘ್ನೇಶ್ ಬಂಧನ

ca8ccbd5-79a0-44df-84e6-f03537212572

ಚೆನ್ನೈ: ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಹಾಗೂ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಪಕ್ಷದ ಶಾಸಕ ಸಿ. ಅರುಳ್ ವಿಘ್ನೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ತಮಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಪದ್ಮಜಾ ಅವರು ನವೆಂಬರ್ 23ರಂದು ಕಲ್ಲಕುರಿಚಿ ಪೊಲೀಸ್ ವರಿಷ್ಠಾಧಿಕಾರಿ ಶಹನಾಜ್ ಐ. ಅವರಿಗೆ ಅಧಿಕೃತ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಲ್ಲಕುರಿಚಿ ಮಹಿಳಾ ಠಾಣೆ ಪೊಲೀಸರು ಶಾಸಕರ ವಿರುದ್ಧ ಐದು ವಿವಿಧ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಹೈಕೋರ್ಟ್ ಮಧ್ಯಪ್ರವೇಶ, ವಿಶೇಷ ತನಿಖಾಧಿಕಾರಿ ನೇಮಕ: ಡಿಎಂಕೆ ಸಂಸದೆ ಕನಿಮೊಳಿ ಕರುಣಾನಿಧಿ ಅವರು ಈ ಪ್ರಕರಣವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿದ ಬಳಿಕ, ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಎಂಕೆ ಮತ್ತು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ತೀವ್ರ ಒತ್ತಾಯ ಹೇರಿದ್ದವು. ರಾಷ್ಟ್ರೀಯ ಮಹಿಳಾ ಆಯೋಗ ಸಹ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿತ್ತು.

ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದ ಮದ್ರಾಸ್ ಹೈಕೋರ್ಟ್, ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನ್ಯಾಯಯುತ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ, ತಿರುಪ್ಪೂರು ಎಸ್‌ಪಿ ಸೃಷ್ಟಿ ಸಿಂಗ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದ್ದು, ಐಜಿಪಿ ಎನ್. ಕಾಮಿನಿ ಅವರಿಗೆ ತನಿಖೆಯ ಮೇಲ್ವಿಚಾರಣೆ ವಹಿಸಲಾಗಿದೆ.

error: Content is protected !!