ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಮನನೆಗೆ ಢಿಕ್ಕಿ ಹೊಡೆದ ಟಿಟಿ ವಾಹನ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಮನೆಯ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಸಮೀಪದ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಶನಿವಾರ ಸಂಭವಿಸಿದೆ.
ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ಮನೆಗೂ ಹಾನಿಯಾಗಿದೆ.
ಘಟನೆಯ ಸಮಯದಲ್ಲಿ ಮನೆಯಲ್ಲಿ ಒಬ್ಬರು ಮಾತ್ರ ಇದ್ದರು. ಮನೆಯಲ್ಲಿ ಇದ್ದವರಿಗೆ ಅಪಾಯ ಆಗಿಲ್ಲ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.




