November 29, 2026

ಪಾರ್ಕ್ ಜಾಗವನ್ನೇ ಸೈಟ್‌ ಮಾಡಿ ಖಾಸಗಿಯವರಿಗೆ ಖಾತೆ ಮಾಡಿದ್ದ PDO ಅಮಾನತು

0
image_editor_output_image-2010695839-1795942026508

ಚಿಕ್ಕಬಳ್ಳಾಪುರ: ಪಾರ್ಕ್ ಹಾಗೂ ನಾಗರಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ನಿವೇಶನಗಳನ್ನ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಹೆಸರಿಗೆ ಇ-ಸ್ವತ್ತು ಖಾತೆಗಳನ್ನು ವಿತರಿಸಿದ ಆರೋಪದ ಹಿನ್ನೆಲೆ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಎ. ಭಾಗ್ಯಲಕ್ಷ್ಮಿ ಅವರನ್ನ ಅಮಾನತುಗೊಳಿಸಲಾಗಿದೆ.

ಬಾಗೇಪಲ್ಲಿ ವಕೀಲ ಎನ್‌. ನಾಗಭೂಷಣ್ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ತನಿಖೆ ನಡೆಸಿತ್ತು. ತನಿಖೆಯಲ್ಲಿ ಅನುಮೋದಿತ ನಕ್ಷೆಯಲ್ಲಿ ಕೇವಲ 17 ನಿವೇಶನಗಳಿಗೆ ಅವಕಾಶವಿದ್ದರೂ, ಪಾರ್ಕ್‌ಗೆ (Park) ಮೀಸಲಿಟ್ಟ ಜಾಗದಲ್ಲಿ ಹೆಚ್ಚುವರಿಯಾಗಿ 6 ನಿವೇಶನಗಳನ್ನ ಸೃಷ್ಟಿಸಿ ಇ-ಸ್ವತ್ತು ವಿತರಿಸಿರುವುದು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!