November 29, 2026

ಸಿನಿಮಾದಲ್ಲಿ ಅವಕಾಶ ಸಿಗದಿದ್ದಕ್ಕೆ ಮನನೊಂದು ನಟ ಆತ್ಮಹತ್ಯೆ

0
image_editor_output_image1685883008-1795960795760

ಮರಾಠಿ ಚಿತ್ರರಂಗದ ನಟ ತುಷಾರ್ ಘಡಿಗಾಂವ್ಕರ್ (32) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜೂನ್ 20ರ ಶುಕ್ರವಾರದಂದು ತುಷಾರ್ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚಿತ್ರರಂಗದಲ್ಲಿ ನಿರೀಕ್ಷಿತ ಅವಕಾಶಗಳು ಸಿಗದಿರುವುದು ಹಾಗೂ ವೃತ್ತಿಜೀವನಕ್ಕೆ ಸಂಬಂಧಿಸಿದ ಒತ್ತಡವೇ ಅವರ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.

ನಟನ ಸಾವಿನ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಟ ಅಂಕುರ್ ವಿಠಲರಾವ್ ವಾಧವ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

“ಏಕೆ ಸ್ನೇಹಿತಾ? ಯಾವುದಕ್ಕಾಗಿ ಈ ನಿರ್ಧಾರ? ಕೆಲಸಗಳು ಬರುತ್ತವೆ, ಹೋಗುತ್ತವೆ. ನಾವು ಮತ್ತೊಂದು ಮಾರ್ಗವನ್ನು ಕಂಡುಕೊಳ್ಳಬೇಕು. ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಇಂದಿನ ಪರಿಸ್ಥಿತಿ ಕಠಿಣವಾಗಿದೆ ಎಂಬುದನ್ನು ಒಪ್ಪುತ್ತೇನೆ. ಆದರೆ ಇಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ತುಷಾರ್, ನೀವು ಸೋತರೆ ನಾವೆಲ್ಲರೂ ಸೋತಂತೆ” ಎಂದು ಸಂತಾಪ ಸೂಚಿಸಿದ್ದಾರೆ.

ನಟನ ಅಕಾಲಿಕ ನಿಧನಕ್ಕೆ ಚಿತ್ರರಂಗದ ಹಲವರು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!