ಮಡಿಕೇರಿ: ದುಬಾರೆ ಸಾಕಾನೆ ಶಿಬಿರ ಮತ್ತೆ ಆರಂಭ
ಮಡಿಕೇರಿ: ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಿದೆ.
ಆದರೆ ಗೂಗಲ್‌ನಲ್ಲಿ ಪರಿಶೀಲಿಸಿದರೆ ಇನ್ನೂ ‘ತಾತ್ಕಾಲಿಕ ಬಂದ್’ ಎಂದೇ ತೋರಿಸುತ್ತಿರುವುದರಿಂದ ಪ್ರವಾಸಿಗರಲ್ಲಿ ಗೊಂದಲ ಉಂಟಾಗಿದೆ.
ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿಬಿರದಲ್ಲಿ ಸೀಮಿತ ಪ್ರಮಾಣದಲ್ಲಿ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕ್ಷಣಾ ಸಮಯ ಹಾಗೂ ಪ್ರವೇಶದ ಅವಕಾಶವನ್ನು ಮತ್ತಷ್ಟು ವಿಸ್ತರಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ಕೇಳಿಬಂದಿದೆ.




