November 29, 2026

ದುಬೈನಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಸೆರೆ

0
image_editor_output_image1835587392-1795961731766

ಉಡುಪಿ: ಸುಮಾರು 24 ವರ್ಷಗಳ ಹಿಂದೆ ಉಡುಪಿಯ ಕುಕ್ಕಿಕಟ್ಟೆ ಜಂಕ್ಷನ್‌ನಲ್ಲಿ ನಡೆದಿದ್ದ ಮನೋಹರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ರಾಜೇಶ್ ಕೇಶವ ಆಚಾರ್ಯನನ್ನು ಭಾರತಕ್ಕೆ ಕರೆತರಲಾಗಿದೆ.

ಕೇಂದ್ರ ತನಿಖಾ ದಳ ಇಂಟರ್‌ಪೋಲ್, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆಯಿಂದ ಆರೋಪಿಯನ್ನು ಯುಎಇಯಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.

ರಾಜೇಶ್ ಕೇಶವ ಆಚಾರ್ಯ ನವೆಂಬರ್ 27ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕರ್ನಾಟಕ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!