February 4, 2026

ಭೀಕರ ಅಪಘಾತ: ಶಬರಿಮಲೈ ಯಾತ್ರಿ ಸಾವು, ಇಬ್ಬರ ಸ್ಥಿತಿ ಗಂಭೀರ: ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಿದ್ದ ಸಂದರ್ಭ ದುರ್ಘಟನೆ

0
image_editor_output_image276353138-1641611885093

ಚಿಕ್ಕಬಳ್ಳಾಪುರ: ಇಲ್ಲಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಂಧ್ರಪ್ರದೇಶದ ಗುಂತಕಲ್ ಮೂಲದ ಐವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪಾಪಸ್ ಬರುವಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಗ್ಗೆ 5 ಗಂಟೆ ಸಮಯದಲ್ಲಿ ಯಾತ್ರಿಗಳ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಕಾರು ಪಂಚರ್ ಆಗಿದ್ದು, ಟೈರ್​​ ಬದಲಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.ಅಪಘಾತದಲ್ಲಿ ಮೃತಪಟ್ಟವರನ್ನು ಧರಾನೇಶ್ (22) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದಾರೆ. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಇತರ ಇಬ್ಬರು ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!