February 4, 2026

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ:
ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳಿಗೆ ವಿವಿಧ ಹಂತಗಳಲ್ಲಿ ಚುನಾವಣೆ

0
image_editor_output_image-1998859935-1641643706722

ನವದೆಹಲಿ: ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ ಮತ್ತು ಉತ್ತರಾಖಂಡ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. 7 ಹಂತಗಳಲ್ಲಿ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ಒಂದೇ ಹಂತದಲ್ಲಿ ಫೆಬ್ರುವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರುವರಿ 27 ಮತ್ತು 3 ರಂದು ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ,

ಕೋವಿಡ್ ಸಮಯದಲ್ಲಿ ಅದರಲ್ಲೂ ಓಮೈಕ್ರಾನ್ ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ವಿಶಿಷ್ಟ ನೀತಿ ಸಂಹಿತೆ ಜಾರಿಗೆ ನಿರ್ಧರಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ. ಚುನಾವಣೆಯಲ್ಲಿ ಹೆಚ್ಚು ಮತದಾರರು ಪಾಲ್ಗೊಳ್ಳುವ ಬಗ್ಗೆ ನೀತಿ ಸಂಹಿತೆಯಲ್ಲಿ ಗಮನ ಹರಿಸಲಾಗಿದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!