ರಾಜ್ಯದಲ್ಲಿ 388 ಕೊರೋನಾ ಪ್ರಕರಣ ದಾಖಲು: 5 ಮಂದಿ ಮೃತ್ಯು
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.
586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,711 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38007ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.32 ರಷ್ಟಿದ್ದು, ಮರಣ ಪ್ರಮಾಣ ಶೇ. 1.28 ರಷ್ಟಿದೆ.




