ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್‌ಗೆ ವಿಶೇಷ ಉಡುಗೊರೆ ನೀಡಿದ ಎಂ.ಎಸ್ ಧೋನಿ
ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಪಾಕಿಸ್ಥಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಗೆ ಸುಂದರ ಉಡುಗೊರೆಯೊಂದನ್ನು ನೀಡಿದ್ದಾರೆ.

ರೌಫ್ ಟ್ವಿಟರ್ ನಲ್ಲಿ ಈ ಬಗ್ಗೆಬರೆದುಕೊಂಡಿದ್ದು, ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನ ತನ್ನ ನಂಬರ್ ‘7’ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.
ಉಡುಗೊರೆ ನೀಡಿದ ಧೋನಿ ಮತ್ತು ಸಿಎಸ್‌ಕೆ ತಂಡದ ಮ್ಯಾನೇಜರ್ ಗೆ ಧನ್ಯವಾದವನ್ನೂ ತಿಳಿಸಿದ್ದಾರೆ.
‘ಲೆಜೆಂಡ್ ಮತ್ತು ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಅವರು ಶರ್ಟ್ ಅನ್ನು ಸುಂದರವಾದ ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ. ಅವರ ರೀತಿಯ ಮತ್ತು ಸದ್ಭಾವನೆಯ ಮೂಲಕ ಇನ್ನೂ ಹೃದಯಗಳನ್ನು ಗೆಲ್ಲುತ್ತಿದ್ದಾರೆ ಎಂದು ರೌಫ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ರೌಫ್ ಗೆ ಧೋನಿ ವಿರುದ್ಧ ಆಡಲು ಎಂದೂ ಅವಕಾಶ ಸಿಗಲಿಲ್ಲ. ಕಳೆದ ವರ್ಷದ ಟಿ20 ವಿಶ್ವಕಪ್ ಸೂಪರ್ 12 ಹಂತದಲ್ಲಿ ಎರಡು ತಂಡಗಳು ಮುಖಾಮುಖಿಯಾದಾಗ ಹ್ಯಾರಿಸ್ ರೌಫ್ ಪಾಕಿಸ್ತಾನದ ಪರವಾಗಿ ಆಡಿದ್ದರು. ಈ ವೇಳೆ ಎಂ.ಎಸ್.ಧೋನಿ ಟೀಂ ಇಂಡಿಯಾದ ಮೆಂಟರ್ ಆಗಿದ್ದರು.
2020ರ ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮುಂಬರುವ 15ನೇ ಸೀಸನ್ ನಲ್ಲೂ ಸಿಎಸ್ ಕೆ ಪರವಾಗಿ ಕಾಣಿಸಿಕೊಳ್ಳಲಿದ್ದಾರೆ.




