March 23, 2026

ಮಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘನೆ: 1,74,100 ರೂ.ವಸೂಲಿ

0
IMG-20220109-WA0014.jpg

ಮಂಗಳೂರು: ಕೊರೋನಾ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಇಂದು ವೀಕೆಂಡ್‌ ಕರ್ಫ್ಯೂ ವಿಧಿಸಲಾಗಿತ್ತು. ಈ ಮಧ್ಯೆ ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸರಕಾರದ ನಿಯಮ ಉಲ್ಲಂಘನೆ ಮಾಡಿದ 517 ವಾಹನಗಳ ಭಾರತೀಯ ಮೋಟಾರು ಕಾಯ್ದೆಯಡಿ ವಿರುದ್ಧ ಕೇಸ್‌ ದಾಖಲಿಸಿದ್ದು, 1,74,100 ರೂಪಾಯಿ ಸಂಗ್ರಹವಾಗಿದೆ. ಉಳಿದಂತೆ 110 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೊತೆಗೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ 369 ಮಾಸ್ಕ್‌ ಉಲ್ಲಂಘನೆ ಪ್ರಕರಣದಲ್ಲಿ 76,800 ರೂಪಾಯಿ ದಂಡ ಸಂಗ್ರಹ ಮಾಡಲಾಗಿದೆ.

ಇಂದು ಸಂಜೆಯವರೆಗೆ ಗ್ರಾಮಾಂತರ ವ್ಯಾಪ್ತಿಯಲ್ಲಿ 10 ವಾಹನಗಳನ್ನು ವಶಪಡಿಸಿಕೊಂಡಿದ್ದು, 108 ಮಾಸ್ಕ್‌ ಉಲ್ಲಂಘನೆ ನಡೆದ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

error: Content is protected !!