February 4, 2026

ಸಾಲೆತ್ತೂರು: ಧಾರ್ಮಿಕ ಭಾವನೆಗೆ ಧಕ್ಕೆ, ಆರೋಪಿಗಳ ಬಂಧನವಾಗದ ಹಿನ್ನೆಲೆ: ಜ.11ರಂದು ವಿಟ್ಲ ಬಂದ್ ಗೆ ಹಿಂ.ಜಾ.ವೇ ಕರೆ

0
image_editor_output_image-379971865-1641723951650

ವಿಟ್ಲ: ಕರಾವಳಿ ಜಿಲ್ಲೆಯ ಆರಾಧ್ಯ ಸ್ವಾಮಿ ಕೊರಗಜ್ಜ ದೈವಕ್ಕೆ ಅಪಮಾನವೆಸಗಿದ ಆರೋಪಿಗಳ ಬಂಧನವಾಗದ ಹಿನ್ನೆಲೆ, ಜ.11ರ ಮಂಗಳವಾರ ದಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರ ವರಗೆ ಸ್ವಯಂ ಪ್ರೇರಿತ ವಿಟ್ಲ ಬಂದ್ ನಡೆಸಲು ಹಿಂದು ಜಾಗರಣ ವೇದಿಕೆ ಕರೆ ನೀಡಿದೆ.

ಕೊಳ್ನಾಡು ಗ್ರಾಮದ ಯುವತಿಯ ಮದುವೆ ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನನ ಜತೆ ವಿವಾಹ ಮಧ್ಯಾಹ್ನ ನಡೆದಿದ್ದು, ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ.

ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಹೋಲುವ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!