ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿಗೆ 4 ವರ್ಷ ಜೈಲು ಶಿಕ್ಷೆ
ಬ್ಯಾಂಕಾಕ್: ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಪರವಾನಗಿ ಇಲ್ಲದೆ ವಾಕಿ–ಟಾಕಿ ಬಳಕೆ ಸೇರಿದಂತೆ ಹಲವು ಆರೋಪಗಳಿಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಗಿದೆ ಎಂದು ವಿಚಾರಣೆಯ ಬಗ್ಗೆ ತಿಳಿದಿರುವ ಮೂಲಗಳು ತಿಳಿಸಿವೆ ಎಂದು ಅದು ಹೇಳಿದೆ.
ನೊಬೆಲ್ ಪ್ರಶಸ್ತಿ ವಿಜೇತೆ 76 ವರ್ಷದ ಸೂಕಿ ಮೇಲಿನ ಸುಮಾರು ಹನ್ನೆರಡು ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಗರಿಷ್ಠ 100 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷದ ಫೆಬ್ರುವರಿ ತಿಂಗಳಲ್ಲಿ ಮ್ಯಾನ್ಮಾರ್‌ನಲ್ಲಾದ ಸೇನಾ ದಂಗೆಯಲ್ಲಿ ಅವರು ಬಂಧನಕ್ಕೆ ಒಳಗಾಗಿದ್ದರು.




