February 1, 2026

ಜೀಪು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಇಬ್ಬರು ಯುವಕರು ಮೃತ್ಯು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ

0
image_editor_output_image406166739-1641835274331

ಸಕಲೇಶಪುರ: ಜೀಪು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಪಟ್ಟಣದ ಪಶು ಆಸ್ಪತ್ರೆ ಮುಂಭಾಗ ಸೋಮವಾರ ರಾತ್ರಿ ಸಂಭವಿಸಿದೆ.

ಮೃತ ಯುವಕರನ್ನು ಸಕಲೇಶಪುರ ತಾಲ್ಲೂಕಿನ ಹಲ್ಲಹಳ್ಳಿ ಗ್ರಾಮದ ಮನೋಜ್‌ಕುಮಾರ್‌ (24) ಹಾಗೂ ಆಲೂರು ತಾಲ್ಲೂಕು ಬೆಟ್ಟದಳ್ಳಿ ಗ್ರಾಮದ ಶಶಾಂಕ್‌ (25) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!