February 1, 2026

ಸಾಲೆತ್ತೂರು ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ ಪ್ರಕರಣದಲ್ಲಿ ಆರೋಪಿ ಪರ ನಿಂತ ಆರೋಪ: ಮಹಮ್ಮದ್ ಅಸ್ಗರ್‌ ಬಿಜೆಪಿ ಪಕ್ಷದಿಂದ ಉಚ್ಛಾಟನೆ

0
IMG-20220110-WA0083

ಮಂಗಳೂರು: ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಸಾಲೆತ್ತೂರಿನಲ್ಲಿ ನಡೆದ ಕೊರಗಜ್ಜ ದೈವಕ್ಕೆ ಮದುಮಗ ಅವಮಾನ ಮಾಡಿದ ಪ್ರಕರಣದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಅಂದರೆ ಮದುಮಗನ ಸಹೋದರನನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಆತನನ್ನು ಪೊಲೀಸರು ಬಿಡುಗಡೆ ಮಾಡಿದ್ದರು. ಈ ವಿಚಾರದಲ್ಲಿ ಅಸ್ಗರ್ ಕೈವಾಡವಿತ್ತು. ಎಂಬ ಆರೋಪ ಕೇಳಿ ಬಂದಿತ್ತು.

Leave a Reply

Your email address will not be published. Required fields are marked *

You may have missed

error: Content is protected !!