July 6, 2026

ವಿಟ್ಲ: ಮದುಮಗನಿಗೆ ಕೊರಗಜ್ಜ ದೈವದ ವೇಷ ಧರಿಸಿದ ಪ್ರಕರಣ:
ಪ್ರಮುಖ ಆರೋಪಿ ಸಹಿತ ಇಬ್ಬರ ಬಂಧನ

0
image_editor_output_image2123538839-1641867917690

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ವರನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿತ ಆರೋಪಿಗಳು.

ಇಂದು ಹಿ.ಜಾ.ವೇ ವಿಟ್ಲ ಬಂದ್ ಗೆ ಕರೆ ನೀಡಿದ್ದು, ಇದರ ನಡುವೇ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!