ಮೇಕೆದಾಟು ಪಾದಯಾತ್ರೆ:
ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮತ್ತೊಂದು ದೂರು ದಾಖಲು
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ ಪ್ರವೀಣ್ ಸೂದ್ ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.
ಡಿಜಿ, ಐಜಿಪಿ ಪ್ರವೀಣ್ ಸೂದ್ ಅವರಿಗೆ ಆಯೋಗ ಬರೆದ ಪತ್ರ ಲಭ್ಯವಾಗಿದ್ದು, ಡಿಕೆ ಶಿವಕುಮಾರ್ ಕೋವಿಡ್ ನಿಯಮ ಪಾಲಿಸದೇ ಮಕ್ಕಳ ಜತೆ ಬೆರೆತಿದ್ದಾರೆ. ಶಾಲಾ ಮಕ್ಕಳ ಜತೆ ಕುಳಿತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮಾಸ್ಕ್ ಧರಿಸಿದೇ ಶಾಲಾಮಕ್ಕಳ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಡಿಜಿ ಪ್ರವೀಣ್ ಸೂದ್ ಗೆ ಪತ್ರದಲ್ಲಿ ಹೇಳಿದೆ.




