February 1, 2026

ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಜನವರಿ 14ರಂದು ತೀರ್ಪು

0
image_editor_output_image-1087163087-1641881344996.jpg

ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದ ಆರೋಪಿ ಬಿಷಪ್ ಫ್ರಾಂಕೋ ಮುಲಕ್ಕಲ್ ವಿಚಾರಣೆಯನ್ನು ಕೇರಳದ ಕೊಟ್ಟಾಯಂನ ವಿಚಾರಣಾ ನ್ಯಾಯಾಲಯವು ಮುಕ್ತಾಯಗೊಳಿಸಿದೆ.

ಕೊಟ್ಟಾಯಂ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಜಿ.ಗೋಪಕುಮಾರ್ ಸೋಮವಾರದಂದು ತೀರ್ಪು ಕಾಯ್ದಿರಿಸಿದ್ದು, ಜನವರಿ 14ರ ಶುಕ್ರವಾರದಂದು ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು.

2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!