May 16, 2026

ನಟ ಶಾರೂಕ್ ಖಾನ್ ಮನೆ ಸ್ಫೋಟಿಸುವುದಾಗಿ ಬೆದರಿಕೆ: ಆರೋಪಿಯ ಬಂಧನ

0
image_editor_output_image-173739839-1641964158691.jpg

ಮುಂಬೈ: ಬಾಲಿವುಡ್ ನ ಖ್ಯಾತ ನಟ ಶಾರೂಕ್ ಖಾನ್ ಅವರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಜ.11 ರಂದು ಬಂಧಿಸಲಾಗಿದೆ. ಜನವರಿ 6, 2022 ರಂದು ಅನಾಮಿಕನೊಬ್ಬ ಮಹಾರಾಷ್ಟ್ರ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಶಾರುಖ್ ಖಾನ್ ಅವರ ಐಷಾರಾಮಿ ಬಂಗಲೆ ಮನ್ನತ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

ಈ ಪ್ರಕರಣದ ಬೆನ್ನತ್ತಿದ ಮುಂಬೈ ಪೊಲೀಸರು,  ಕರೆಯನ್ನು ಟ್ರೇಸ್ ಮಾಡಿದಾಗ ಮಧ್ಯಪ್ರದೇಶದ ಜಬಲ್‌ಪುರದಿಂದ ಕರೆ ಬಂದಿರುವುದು ಪತ್ತೆಯಾಗಿದೆ. ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು, ಮಧ್ಯಪ್ರದೇಶದ ಜಬಲ್‌ಪುರದಲ್ಲಿಯೇ ಆರೋಪಿಯನ್ನು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿ ಜಿತೇಶ್ ಠಾಕೂರ್ ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!