March 20, 2026

ಕೊಲ್ಲೂರು ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವರು ಗಾಯ

0
image_editor_output_image353790050-1641965514870.jpg

ಕೊಲ್ಲೂರು: ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದು ದಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಹಲವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಅಪಘಾತದಿಂದಾಗಿ 22 ಮಂದಿ ಪ್ರಯಾಣಿಕರು ಗಾಯಗೊಂಡರು. ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ತತ್‌ಕ್ಷಣ ಡಾ| ರಾಬರ್ಟ್‌ ರೆಬೆಲ್ಲೋ ನೇತೃತ್ವದ ವೈದ್ಯರ ತಂಡ ಕರ್ತವ್ಯ ಮುಗಿಸಿ ತೆರಳಿದ್ದ ವೈದ್ಯರು ಹಾಗೂ ಸಿಬಂದಿಯನ್ನು ಕರೆಸಿ ಚಿಕಿತ್ಸೆ ಕೊಡಿಸಿದೆ. 22 ಮಂದಿಯ ಪೈಕಿ ಸಂಕ್ರಪ್ಪ (50), ರೂಪಾ (35), ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಇಬ್ಬರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. ಮತ್ತೂಬ್ಬರ ಪಕ್ಕೆಲುಬು ಮುರಿದಿದೆ. ಜಿಲ್ಲಾಡಳಿತ ಸಕಾಲದಲ್ಲಿ ನೆರವಿಗೆ ಧಾವಿಸಿದೆ.

Leave a Reply

Your email address will not be published. Required fields are marked *

error: Content is protected !!