ಗೋಣಿ ಚೀಲದಲ್ಲಿ ದುಡ್ಡು ತಂದು ಹಂಚುವುದು ಕಾಂಗ್ರೆಸ್ ಸಂಸ್ಕೃತಿ: ಬಸವರಾಜ ಬೊಮ್ಮಾಯಿ
ವಿಜಯಪುರ: ಗೋಣಿ ಚೀಲದಲ್ಲಿ ದುಡ್ಡು ತಂದು ಹಂಚುವ ಸಂಸ್ಕೃತಿ ಬಿಜೆಪಿಯದ್ದಲ್ಲ. ಅದೇನಿದ್ದರೂ ಕಾಂಗ್ರೆಸ್ ಸಂಸ್ಕೃತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾನುವಾರ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಸಿಂದಗಿ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರವನ್ನು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ನವರು ಅಧಿಕಾರದಲ್ಲಿ ಇರುವಷ್ಟು ದಿನ ಅಭಿವೃದ್ಧಿ ಮಾಡದೇ ಅಭಿವೃದ್ಧಿಯ ಹಣವನ್ನು ಲಪಟಾಯಿಸಿ ಈಗ ಗೋಣಿ ಚೀಲದಲ್ಲಿ ಹಣ ತಂದು ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು.




