July 6, 2026

ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಗೆ ಕೋವಿಡ್ 19 ಸೋಂಕು ದೃಢ

0
images-2.jpeg

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಈ ಬಗ್ಗೆ ವೀರಪ್ಪ ಮೊಯಿಲಿ ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

“ಇಂದು ಸಂಜೆ ನನಗೆ ಕೋವಿಡ್ ಸೋಂಕು ದೃಢವಾಗಿದೆ. ಕೆಮ್ಮು ಮತ್ತು ಜ್ವರದ ರೋಗಲಕ್ಷಣಗಳನ್ನು ಹೊಂದಿದ್ದೇನೆ. ನಾನು ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದರಿಂದ ಹೆಚ್ಚು ತೀವ್ರವಾದ ಅನಾರೋಗ್ಯದಿಂದ ನನ್ನನ್ನು ರಕ್ಷಿಸುತ್ತಿದೆ. ನಾನು ಸದ್ಯ ಹೋಮ್ ಕ್ವಾರಂಟೈನ್‌ ನಲ್ಲಿದ್ದೇನೆ ಮತ್ತು ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ಪರೀಕ್ಷಿಸಲು ವಿನಂತಿಸುತ್ತೇನೆ” ಎಂದು ಮೊಯಿಲಿ ಬುಧವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.

ವೀರಪ್ಪ ಮೊಯಿಲಿ ಅವರು ಮೇಕೆದಾಟು ಪಾದಯಾತ್ರೆಯ ಮೊದಲ ದಿನ ಭಾಗವಹಿಸಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರ ಪೈಕಿ ಕೋವಿಡ್ ಸೋಂಕಿಗೊಳಗಾದವರ ಸಂಖ್ಯೆ ನಾಲ್ಕಕ್ಕೇರಿದೆ.

ಮಾಜಿ ಸಚಿವ ಎಚ್ ಎಂ ರೇವಣ್ಣ, ಎಂಎಲ್ ಸಿ ಸಿಎಂ ಇಬ್ರಾಹಿಂ ಅವರಿಗೂ ಕೋವಿಡ್ ಸೋಂಕು ದೃಢವಾಗಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಶಾಸಕ ಎನ್ ಎಚ್ ಶಿವಶಂಕರ ರೆಡ್ಡಿಗೂ ಬುಧವಾರ ಕೋವಿಡ್ ಸೋಂಕು ದೃಢವಾಗಿದೆ.

ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಹೈಕೋರ್ಟ್‌ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಯಾತ್ರೆಗೆ ನಿರ್ಬಂಧ ಹೇರಿದೆ. ಈ ಸಂಬಂಧ ಬುಧವಾರ ರಾತ್ರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪಾದಯಾತ್ರೆಯಲ್ಲಿ ವಾಹನ ಸಂಚಾರ ಹಾಗೂ ಜನರು ಪಾಲ್ಗೊಳ್ಳುವುದನ್ನು ತತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!