July 6, 2026

ಮೇಕೆದಾಟು ಪಾದಯಾತ್ರೆ ಇನ್ನು ಒಂದು ಹೆಜ್ಜೆ ಕೂಡಾ ಮುಂದೆ ಹೋಗಲು ಬಿಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

0
image_editor_output_image57549229-1642054006466.jpg

ಬೆಂಗಳೂರು: ‘ಪಾದಯಾತ್ರೆ ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆ ಇನ್ನು ಒಂದು ಹೆಜ್ಜೆ ಕೂಡಾ ಮುಂದೆ ಹೋಗಲು ಬಿಡುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಪಾದಯಾತ್ರ ತಡೆಯಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು‌.

‘ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಗೆ ಯಾವುದೇ ಬದ್ಧತೆ ಇಲ್ಲ. ಪಾದಯಾತ್ರೆಯಲ್ಲಿ ಭಾಗವಹಿಸಿದ ಹಲವರಿಗೆ ಕೋವಿಡ್ ದೃಢಪಟ್ಟಿದೆ. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸಲಾಗುತ್ತಿದೆ’ ಎಂದರು.

‘ಹೈಕೋರ್ಟ್ ಆದೇಶ ಹಾಗೂ‌ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಕಾಂಗ್ರೆಸ್ ಸ್ ನಿಲ್ಲಿಸಲಿ. ಜನ ಆತಂಕಗೊಂಡಿದ್ದಾರೆ ಎಂದೂ ಮನವಿ‌ ಮಾಡಿದರು.

Leave a Reply

Your email address will not be published. Required fields are marked *

You may have missed

error: Content is protected !!