March 23, 2026

ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರ ನಿರ್ಧಾರ

0
Screenshot_20220113-131955_Chrome.jpg

ರಾಮನಗರ: ಮೇಕೆದಾಟು ಯೋಜನೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಮನಗರದಲ್ಲಿ ತುರ್ತು ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸದ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಇಲ್ಲಿಂದಲೇ ಆರಂಭಿಸುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದಾರೆ.

ಹೈಕೋರ್ಟ್ ಸೂಚನೆ ಪಾಲಿಸೋಣ. ಸದ್ಯಕ್ಕೆ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡೋಣ ಎಂದು ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಅದಕ್ಕೆ ಕಾಂಗ್ರೆಸ್ ಇತರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.

ಒಂದು ಕಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೀಡಿದ್ದ ಸೂಚನೆ, ಮತ್ತೊಂದು ಕಡೆ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಮನವಿ, ಇನ್ನೊಂದು ಕಡೆ ಹೈಕೋರ್ಟ್ ಕೂಡ ಕೊರೊನಾ ಸಂದರ್ಭದಲ್ಲಿ ಪಾದಯಾತ್ರೆ ಬಗ್ಗೆ ಗರಂ ಆಗಿದ್ದು, ಕಾಂಗ್ರೆಸ್ ನಾಯಕರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಕಾರಣ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!