August 22, 2026

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ: ಮೂವರು ವಶಕ್ಕೆ

0
Screenshot_20220113-191952_Chrome.jpg

ಉಡುಪಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್‌ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಎಂಬವರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಇವರು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದರು.

ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಎಸಿಬಿ ಎಸ್ ಪಿ ಸೈಮನ್, ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎಂಜಿನಿಯರ್‌ ಗುರುಪ್ರಸಾದ್ ಎಂಬವರಿಂದ 2.50 ಲಕ್ಷ ವಶ ಪಡಿಸಿಕೊಂಡಿದ್ದಾರೆ. ಎಸಿಬಿ ಎಸ್ ಐ ಸತೀಶ್, ರಫೀಕ್ ಎಂ ರೈಡ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!