August 22, 2026

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು:
ಏಳು ಮಂದಿ ಸ್ಥಳದಲ್ಲೇ ಮೃತ್ಯು

0
image_editor_output_image-1330773041-1642134070355

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಮಕರ ಸಂಕ್ರಮಣ ದಿನದಂದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಏಳು ಮಂದಿಯ ಪೈಕಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ‌. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರು ಯಾದಗಿರಿ ಜಿಲ್ಲೆಯ ಶಹಾಪೂರದವರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಹೊಸಪೇಟೆಗೆ ಹೋಗುವ ಮಾರ್ಗ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ‌. ಜಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!