July 5, 2026

ಮಂಗಳೂರು: ರಸ್ತೆ ಅಪಘಾತ, ಮುಂಬೈನ ಹೋಟೆಲ್‌ ಉದ್ಯಮಿ ಮೃತ್ಯು

0
image_editor_output_image-782438791-1642141201507.jpg

ಮಂಗಳೂರು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎಂದು ಗುರುತಿಸಲಾಗಿದ್ದು, ಇವರು ಮುಂಬೈನ ಹೋಟೆಲ್‌ ಉದ್ಯಮಿ ಎಂದು ತಿಳಿದು ಬಂದಿದೆ.

ಜ.13ರ ಗುರುವಾರ ಭಾಸ್ಕರ್ ಶೆಟ್ಟಿಯವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಬಂದು ಇವರಿಗೆ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಹಳೆಯಂಗಡಿ ಸಮೀಪದ ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!