August 22, 2026

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ:
ವಿಟ್ಲ ಮತ್ತು ಪುತ್ತೂರು ನಿವಾಸಿಗಳು ಮೃತ್ಯು

0
IMG-20220114-WA0053

ಪುತ್ತೂರು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಪುತ್ತೂರು ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಚನ್ನರಾಯಪಟ್ಟಣ ಎಂಬಲ್ಲಿ ಶುಕ್ರವಾರದಂದು ಬೆಳಗ್ಗೆ ನಡೆದಿದೆ.

ಮೃತರನ್ನು ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ಈಶ್ವರಮಂಗಲ ನಿವಾಸಿ ದೇವಿಪ್ರಸಾದ್ ಶೆಟ್ಟಿ ಹಾಗೂ ವಿಟ್ಲದ ಕುಡ್ತಮುಗೇರು ನಿವಾಸಿ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!