February 4, 2026

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಪ್ರಕರಣ:
ಆಕಾಶಭವನ ಶರಣ್ ಸಹಿತ 4 ಸಹಚರರ ಬಂಧನ

0
image_editor_output_image-828044739-1642149597972.jpg

ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಯಾನೆ ರೋಹಿದಾಸ್ ಹಾಗೂ ಆತನ ಇತರ 4 ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರೋಹಿದಾಸ್ ಯಾನೆ ಶರಣ್ ಆಕಾಶಭವನ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40), ಸೈನಾಲ್ ಡಿ ಸೋಜಾ (22), ಪ್ರಸಾದ್ (39), ಚೇತನ್ ಕೊಟ್ಟಾರಿ (35) ಎಂದು ಗುರುತಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ ಡಿಸೆಂಬರ್ 8ರಂದು ರಾತ್ರಿ ಹಳೆಯಂಗಡಿ ನಿವಾಸಿಯೊಬ್ಬರು ತನ್ನ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಮಯ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರಲಿದ್ದ ಮೊಬೈಲ್ ಫೋನ್, ನಗದು ರೂ. 3000 ಹಾಗೂ ದ್ವಿಚಕ್ರ ವಾಹನವನ್ನು ಸುಲಿಗೆ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!