ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ
ಹೊಸದಿಲ್ಲಿ: ಪೂರ್ವ ದಿಲ್ಲಿಯ ಗಾಜಿಪುರದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದೆ. ಅನುಮಾನಾಸ್ಪದ ಬ್ಯಾಗ್ ಪತ್ತೆಯಾದ ಹಿನ್ನೆಲಯಲ್ಲಿ ಪರಿಶೀಲನೆ ನಡೆಸಿದಾಗ ಬಾಂಬ್ ಇರುವಿಕೆ ಪತ್ತೆಯಾಗಿದ್ದು, ಸುರಕ್ಷಿತ ಸ್ಪೋಟ ನಡೆಸಲಾಗಿದೆ.
ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ) ಜೊತೆಗೆ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳವು ಬಾಂಬ್ ಸ್ಫೋಟಿಸುವಲ್ಲಿ ಯಶಸ್ವಿಯಾಗಿದೆ.
ದೆಹಲಿ ಪೊಲೀಸ್ ವಿಶೇಷ ದಳವೂ ಸ್ಥಳಕ್ಕೆ ತಲುಪಿದೆ. ಘಾಜಿಪುರ ಮಂಡಿಯಲ್ಲಿ ಪತ್ತೆಯಾದ ಬಾಂಬ್ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ ಖಚಿತಪಡಿಸಿದ್ದಾರೆ




