February 4, 2026

ಉಡುಪಿ: ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

0
IMG-20220115-WA0000.jpg

ಉಡುಪಿ: ಇಲ್ಲಿನ ಕುಂಜೂರು ಸಮೀಪ ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದೇಹ ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ರೈಲು ಹಳಿಯ ಮಧ್ಯೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ಚಲಿಸಿದ ರಭಸಕ್ಕೆ ದೇಹ ಸಂಪೂರ್ಣ ಛಿದ್ರಛಿದ್ರವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪಡುಬಿದ್ರಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೃತ ದೇಹವನ್ನು ಆಸಿಫ್ ಆಪದ್ಬಾಂಧವ ಅವರ ತಂಡ ಪಡುಬಿದ್ರಿ ಶವಾಗಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!