August 22, 2026

ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

0
IMG_20220115_191305.jpg

ಶಿವಮೊಗ್ಗ: ಮಹಿಳೆಯೋರ್ವಳು ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ಯಡೇಹಳ್ಳಿಯ ನಿವಾಸಿ ವೀಣಾ ತನ್ನ ಪುಟ್ಟ ಮಕ್ಕಳಾದ ಜಾನವಿ ಹಾಗೂ ದೈವಿಕಾಳನ್ನು ಹಿಡಿದುಕೊಂಡು ಭದ್ರಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೀಣಾ ಹಾಗೂ ಸಂತೋಷ್ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ ಹಾಗೂ ಆಶಾಗೆ 8 ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಸ್ ನೀಡುವಂತೆ ಕೇಳಿದ್ದಕ್ಕೆ ವೀಣಾ ಅಕ್ರಮ‌ ಸಂಬಂಧ ಹೊಂದಿದ್ದಾಳೆ ಎಂದು ಅಪಪ್ರಚಾರ ನಡೆಸಿದ್ದಾರೆ. ಇದರಿಂದ ಮನನೊಂದು ವೀಣಾ ಮಕ್ಕಳ ಜೊತೆಗೆ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!