July 6, 2026

ಹೆಚ್ಚುತ್ತಿರುವ ಲೈಂಗಿಕ ಕಿರುಕುಳ ಪ್ರಕರಣಗಳು:ಸುಳ್ಯ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲು

0
IMG_20220115_220614.jpg

ನಿನ್ನೆ ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಹೆತ್ತ ತಾಯಿಯ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಕಾಮುಕ ಪುತ್ರನ ವರದಿ ಮಾಸುವ ಮುನ್ನವೇ ಇಂದು ಸುಳ್ಯದಲ್ಲಿ ಎರಡು ವಿವಿಧ ಪ್ರಕರಣಗಳು ಸುಳ್ಯ ಠಾಣೆಯಲ್ಲಿ ದಾಖಲಾಗಿದೆ.
ಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಚೇತನ್ ಎಂಬಾತ ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅದೇ ರೀತಿ ಸುಳ್ಯ ತಾಲ್ಲೂಕು ಕಲ್ಲುಗುಂಡ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿಯಲ್ಲಿ ನೆಲ್ಲಿಕುಮೇರಿ ನಿವಾಸಿ ರೋಹಿತ್ 35ವರ್ಷ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಎಲ್ಲಾ ಘಟನೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಕಾಮುಕರ ಅಟ್ಟಹಾಸ ದಿಂದ ಬೆಚ್ಚಿಬಿದ್ದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!