ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ: ಪೊಕ್ಸೋ ಪ್ರಕರಣ ದಾಖಲು
ಪುತ್ತೂರು: ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ.
ದೌರ್ಜನ್ಯ ಎಸಗಿದ ಆರೋಪಿಯನ್ನು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂದು ಗುರುತಿಸಲಾಗಿದೆ.
ಬಾಲಕಿಯು ಹತ್ತಿರದ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.
ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.




