ವಿಟ್ಲ: ಮನೆ ಸಮೀಪ ಅಕ್ರಮವಾಗಿ ಮದ್ಯ ಮಾರಾಟ: ಆರೋಪಿಯ ಬಂಧನ
ವಿಟ್ಲ: ಮನೆಯೊಂದರ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ ನಗದು, ಮದ್ಯ ವಶಪಡಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ಜ.15 ರಂದು ವಿಟ್ಲ ಎಸ್.ಐ. ಸಂದೀಪ್ ಕುಮಾರ್ ಶೆಟ್ಟಿಯವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ಆನಂದ ಪೂಜಾರಿ ಎಂಬವರ ವಾಸ್ತವ್ಯದ ಮನೆಯ ಪಕ್ಕದ ಕೋಣೆಯಲ್ಲಿ ಅಕ್ರಮವಾಗಿ ಮದ್ಯವನ್ನು ಶೇಖರಿಸಿ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸಂಜೆ ವೇಳೆಗೆ ದಾಳಿ ನಡೆಸಿದ್ದರು.




