ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಣೆಯ ಹಿಂದೆ ಹಿಂದುತ್ವದ ಅಜೆಂಡಾವಿದೆ : ಸಿಪಿಐ(ಎಂ) ಟೀಕೆ
ಬೆಳ್ತಂಗಡಿ: ಗಣರಾಜ್ಯೋತ್ಸವ ಪೆರೇಡ್‍ಗೆ ಕೇರಳ ರಾಜ್ಯ ಸರ್ಕಾರದ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ನಿರಾಕರಿಸಿದ ಕೇಂದ್ರ ಸರ್ಕಾರದ ಕ್ರಮ ಹಿಂದುತ್ವದ ಸಿದ್ಧಾಂತದ ಭಾಗವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಳ್ತಂಗಡಿ ತಾಲೂಕು ಸಮಿತಿ ಟೀಕಿಸಿದೆ.

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಸಾಮಾಜಿಕ ಹರಿಕಾರ , ಸಮಾಜ ಸುಧಾರಕ , ಜಾತಿ ಅಸ್ಪೃಶ್ಯತೆ, ಅಸಮಾನತೆ ವಿರುದ್ಧದ ಹೋರಾಟಗಾರ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಕ್ಕೆ ಯಾವ ಸಂದೇಶ ನೀಡುತ್ತದೆ ಎಂದು ಪ್ರಶ್ನಿಸಿದ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ, ನ್ಯಾಯವಾದಿ ಶಿವಕುಮಾರ್ ಎಸ್. ಎಂ , ಮುಖಂಡರಾದ ವಸಂತ ನಡ , ಶೇಖರ್ ಲಾಯಿಲ , RSS ದೇಶದಲ್ಲಿ ಜಾತಿ ತಾರತಮ್ಯವನ್ನು ಪ್ರತಿನಿಧಿಸುವ ಬ್ರಾಹ್ಮಣ್ಯ ಸಿದ್ಧಾಂತವನ್ನು ಪ್ರತಿಪಾದಿಸುತ್ತಿರುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರ ಸುಭಾಶ್ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನೂ ನಿರಾಕರಿಸುವ ಮೂಲಕ ದೇಶದ ಸಮಸ್ತ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಬಗೆದಿದೆ. ದೇಶದ ಎರಡು ಅಪ್ರತಿಮ ಸಾಧನೆಗಾರರಿಗೆ ಆತ್ಮವಂಚನೆಗೈದಿದೆ ಎಂದು ಆರೋಪಿಸಿದ್ದಾರೆ.
ಜನವರಿ 26 ರಂದು ಕೇಂದ್ರ ಸರ್ಕಾರದ ಶ್ರೀ ನಾರಾಯಣ ಗುರುಗಳ ಅವಮಾನ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.





