July 6, 2026

ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

0
n3511537821642482847637d883b36d6284d4170863cfac60edd29292cb6ace74e48f7e1419ea5f750ba0b0.jpg

ಪಾಲಾ: ಖಾಸಗಿ ಬಸ್ಸೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದ ಪಾಲಾ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಡ್ರೈವರ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಅಫ್ಜಲ್​(31) ಹಾಗೂ ಅಬಿನ್​ ಎಂದು ಗುರುತಿಸಲಾಗಿದೆ.

ಇವರಿಬ್ಬರು ಕೇರಳದ ಇಡುಕ್ಕಿಯವರಾಗಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿ ಪ್ರತಿದಿನ ಶಾಲೆಗೆ ಇದೇ ಬಸ್ ನಲ್ಲಿ ಹೋಗುತ್ತಿದ್ದಳು ಎಂದು ತಿಳಿದು ಬಂದಿದೆ.

ಈಗಾಗಲೇ ಮದುವೆ ಮಾಡಿಕೊಂಡಿರುವ ಅಫ್ಜಲ್ ವಿದ್ಯಾರ್ಥಿನಿ ಜೊತೆ ಪ್ರೀತಿಯ ನಾಟಕವಾಡಿದ್ದಾನೆ. ಶನಿವಾರದಂದು ಶಾಲೆ ಬಿಟ್ಟು ಮನೆಗೆ ತೆರಳಲು ಬಾಲಕಿ ಬಸ್ ಸ್ಯಾಂಡ್ ಗೆ ಬಂದಿದ್ದಾಳೆ. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈತನ ಕೃತ್ಯಕ್ಕೆ ಕಂಡಕ್ಟರ್ ಅಬಿನ್ ಸಾಥ್ ನೀಡಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸ್ ಜಪ್ತಿ ಮಾಡಿದ್ದಾರೆ. ಬಾಲಕಿ ನೀಡಿರುವ ಮಾಹಿತಿ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಆಕೆಯನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!