ಐಪಿಎಲ್ 2022 ರ ಲಕ್ನೋ ತಂಡಕ್ಕೆ ಕೆ.ಎಲ್ ರಾಹುಲ್ ನಾಯಕತ್ವ
ನವದೆಹಲಿ: 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಹೊಸದಾಗಿ ಎಂಟ್ರಿ ಕೊಟ್ಟಿರುವ ಲಕ್ನೋ ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ನಾಯಕತ್ವ ವಹಿಸಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಫೆಬ್ರವರಿ 12 ಮತ್ತು 13ರಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.
ಕೆ.ಎಲ್. ರಾಹುಲ್, ರವಿ ಬಿಷ್ಣೋಯಿ, ಆಸ್ಟ್ರೇಲಿಯಾದ ಆಲ್‌ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಅವರು ಲಕ್ನೋ ತಂಡ ಸೇರುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.




