February 1, 2026

ಬಂಟ್ವಾಳ: ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ನದಿ ಹಾರಿ ವ್ಯಕ್ತಿ ಆತ್ಮಹತ್ಯೆ

0
Hands-Drowning-Sea-750x403

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ.

ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.

ಸ್ಥಳದಲ್ಲಿ ದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿ ದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಆದರೆ ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಪತ್ತೆಯಾಗಿರಲಿಲ್ಲ. ಇಂದು ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ಅವರು ನದಿಯಲ್ಲಿ ಈಜಾಡಿ ಹುಡುಕಿದಾಗ ನದಿಯಲ್ಲಿ ಶವ ಪತ್ತೆಯಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!