March 20, 2026

ಉಪ್ಪಿನಂಗಡಿ: ಅಡಿಕೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

0
IMG_20220119_221115.jpg

ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯ ಬಿಳಿಯೂರು ಗ್ರಾಮದಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತರನ್ನು ಪುತ್ತೂರು ತಾಲೂಕು ಕೃಷ್ಣ ನಗರ ಚಿಕ್ಕಮುಡ್ನೂರು ಬಡವು ನಿವಾಸಿ ವಿನಯ ಕುಮಾರ್ (31), ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ಮಹಮ್ಮದ್ ಜುನೈದ್(24) ಎನ್ನಲಾಗಿದೆ.

ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ನೇಂಜ ನಿವಾಸಿ ವಸಂತ ದೇವಾಡಿಗ ಎಂಬವರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜ.11 ರಂದು ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕಳ್ಳತನ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೆತ್ತಿಗೊಂಡ ಪೊಲೀಸರು ಉಪ್ಪಿನಂಗಡಿ ನೆಕ್ಕಿಲಾಡಿ ಜಂಕ್ಷನ್ ಬಳಿ ರಿಕ್ಷಾದಲ್ಲಿದ್ದ ವಿನಯ ಕುಮಾರ್‌ ಮತ್ತು ಮಹಮ್ಮದ್‌ ಜುನೈದ್ ನನ್ನು ಬಂಧಿಸಿದ್ದು, ಆಟೋ ರಿಕ್ಷಾ ಮತ್ತು ಕಳ್ಳತನ ಮಾಡಿದ ಅಡಿಕೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!