ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು
ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಹೆಮ್ಮೆಯ ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ.
ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ಸಂಘಟನೆ ಹಾಗೂ ಗವಳಿ ಸಮಾಜ ವತಿಯಿಂದ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗೆ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ಜತೆಗೆ ಬಹುಮಾನ ವಿತರಣೆ ಸಮಾರಂಭದಲ್ಲಿಯೂ ಪಾಲ್ಗೊಂಡಿದ್ದರು.




